Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:3 - ಪರಿಶುದ್ದ ಬೈಬಲ್‌

3 ಆದ್ದರಿಂದ ಅವರು ಜೆರುಸಲೇಮಿನ ಆಲಯದಿಂದ ತಂದಿದ್ದ ಆ ಪಾತ್ರೆಗಳನ್ನು ತಂದರು. ರಾಜನು, ಅವನ ಅಧಿಕಾರಿಗಳು, ಅವನ ಪತ್ನಿಯರು, ಅವನ ಉಪಪತ್ನಿಯರು ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಂಗಾರದ ಪೂಜಾ ಪಾತ್ರೆಗಳನ್ನು ತರಿಸಿದ. ರಾಜನೂ ಅವನ ಪ್ರಮುಖರೂ ಪತ್ನಿ - ಉಪಪತ್ನಿಯರೂ ಅವುಗಳಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇವಿುನ ದೇವಾಲಯದ ನಡುಗುಡಿಯಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತರಲು ರಾಜನೂ ಅವನ ಮುಖಂಡರೂ ಪತ್ನ್ಯುಪಪತ್ನಿಯರೂ ಅವುಗಳಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:3
11 ತಿಳಿವುಗಳ ಹೋಲಿಕೆ  

ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು.


ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.


ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”


“ಆದರೆ ನೀವು ನನ್ನ ನಾಮವನ್ನು ಘನಪಡಿಸುವದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು