ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.