Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:5 - ಪರಿಶುದ್ದ ಬೈಬಲ್‌

5 ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗಲೇ ಒಬ್ಬನ ಕೈಯ ಬೆರಳುಗಳು ಬಂದು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರಹ ಬರೆದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:5
15 ತಿಳಿವುಗಳ ಹೋಲಿಕೆ  

ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.


ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು.


ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.


ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.


ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಅವರು ಕುಡಿಯುವಾಗ ತಮ್ಮ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸುತ್ತಿದ್ದರು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು