Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:6 - ಪರಿಶುದ್ದ ಬೈಬಲ್‌

6 ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:6
21 ತಿಳಿವುಗಳ ಹೋಲಿಕೆ  

ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


“ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”


ತಮ್ಮ ಕೈಗಳನ್ನು ಮೇಲಕ್ಕೆ ಎತ್ತುವಷ್ಟು ದುಃಖ ಮತ್ತು ಆಯಾಸ ಅವರಲ್ಲಿದೆ. ಅವರ ಕಾಲುಗಳು ನೀರಿನಂತಿರುತ್ತವೆ.


ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.


ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ಅವರು ಕುರುಡರಾಗಲಿ; ಅವರ ಬೆನ್ನುಗಳು ಗೂನಾಗಲಿ.


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ.


ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು.


ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ಬಲಗೊಳಿಸಿರಿ.


ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವದಿಲ್ಲ.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು.


ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು