Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:1 - ಪರಿಶುದ್ದ ಬೈಬಲ್‌

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:1
9 ತಿಳಿವುಗಳ ಹೋಲಿಕೆ  

ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು.


ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.


ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ.


ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.


ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.


ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.


ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.


“ಮೇದ್ಯಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಪಾರಸಿಯ ರಾಜ್ಯದ ದಿವ್ಯಪಾಲಕನ ವಿರುದ್ಧದ ಹೋರಾಟದಲ್ಲಿ ನಾನು ಮಿಕಾಯೇಲನಿಗೆ ಬೆಂಬಲ ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು