ದಾನಿಯೇಲ 6:16 - ಪರಿಶುದ್ದ ಬೈಬಲ್16 ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.