Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:20 - ಪರಿಶುದ್ದ ಬೈಬಲ್‌

20 ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:20
30 ತಿಳಿವುಗಳ ಹೋಲಿಕೆ  

ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ಯಾವಾಗಲೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.


ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಆದರೂ ನಾನು ಯಾವಾಗಲೂ ನಿನ್ನ ಸಂಗಡವಿದ್ದೇನೆ. ನನ್ನ ಕೈಯನ್ನು ಹಿಡಿದುಕೊ.


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.


ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು; ಆತನನ್ನು ಸಂಕೀರ್ತಿಸುವೆನು.


ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.


ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೆಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು