ದಾನಿಯೇಲ 6:22 - ಪರಿಶುದ್ದ ಬೈಬಲ್22 ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.
ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.