ದಾನಿಯೇಲ 6:23 - ಪರಿಶುದ್ದ ಬೈಬಲ್23 ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿ |