ದಾನಿಯೇಲ 6:25 - ಪರಿಶುದ್ದ ಬೈಬಲ್25 ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ. ಅಧ್ಯಾಯವನ್ನು ನೋಡಿ |
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.