ದಾನಿಯೇಲ 6:4 - ಪರಿಶುದ್ದ ಬೈಬಲ್4 ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು. ಅಧ್ಯಾಯವನ್ನು ನೋಡಿ |
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.