Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:7 - ಪರಿಶುದ್ದ ಬೈಬಲ್‌

7 ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:7
25 ತಿಳಿವುಗಳ ಹೋಲಿಕೆ  

ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.


ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.


ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.


ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.


ನನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.


ಆದರೆ ಮಹಾಯಾಜಕರು ಲಾಜರನನ್ನು ಸಹ ಕೊಲ್ಲಲು ಯೋಜನೆಗಳನ್ನು ಮಾಡಿದರು.


ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.


ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.


ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ.


ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.


ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.


ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.


ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು