ದಾನಿಯೇಲ 6:8 - ಪರಿಶುದ್ದ ಬೈಬಲ್8 ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿ |
“ಆದ್ದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನೆಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.
ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೆಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವಿಯಲ್ಲವೆ?” ಎಂದು ಕೇಳಿದರು. ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರಕೊಟ್ಟನು.