Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:10 - ಪರಿಶುದ್ದ ಬೈಬಲ್‌

10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:10
26 ತಿಳಿವುಗಳ ಹೋಲಿಕೆ  

ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.


ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


“‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.


ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.


ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು