Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:11 - ಪರಿಶುದ್ದ ಬೈಬಲ್‌

11 “ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿಕೊಚ್ಚಿಕೊಂಡ ನಿವಿುತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:11
14 ತಿಳಿವುಗಳ ಹೋಲಿಕೆ  

ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


“ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.


ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಡಳಿತವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು