Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:17 - ಪರಿಶುದ್ದ ಬೈಬಲ್‌

17 ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ನನಗೆ - ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:17
9 ತಿಳಿವುಗಳ ಹೋಲಿಕೆ  

ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು