ದಾನಿಯೇಲ 7:18 - ಪರಿಶುದ್ದ ಬೈಬಲ್18 ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’ ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.