Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:20 - ಪರಿಶುದ್ದ ಬೈಬಲ್‌

20 ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:20
9 ತಿಳಿವುಗಳ ಹೋಲಿಕೆ  

“ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.


“ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.


“ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


“ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.


ನಾನು ನೋಡುತ್ತಿದ್ದಂತೆಯೇ ಈ ಚಿಕ್ಕ ಕೊಂಬು ದೇವಭಕ್ತರ ಮೇಲೆ ಬಿದ್ದು ಅವರೊಂದಿಗೆ ಯುದ್ಧಮಾಡುತ್ತಿತ್ತು. ಆ ಕೊಂಬು ಅವರ ಕೊಲೆ ಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು