ದಾನಿಯೇಲ 7:22 - ಪರಿಶುದ್ದ ಬೈಬಲ್22 ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.