ದಾನಿಯೇಲ 7:25 - ಪರಿಶುದ್ದ ಬೈಬಲ್25 ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು. ಅಧ್ಯಾಯವನ್ನು ನೋಡಿ |
ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.