Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:28 - ಪರಿಶುದ್ದ ಬೈಬಲ್‌

28 “ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:28
19 ತಿಳಿವುಗಳ ಹೋಲಿಕೆ  

ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.


ಮರಿಯಳು ಈ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು, ಅವುಗಳ ಬಗ್ಗೆ ಯೋಚಿಸತೊಡಗಿದಳು.


ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.


ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.


“ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


“ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.


ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು.


“ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.


ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.


ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.


“ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ಯೋಸೇಫನು ತನ್ನ ತಂದೆಗೂ ಸಹ ಈ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆನು. ಇದು ಮೊದಲಿನ ದರ್ಶನದ ತರುವಾಯ ಕಂಡದ್ದು.


ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.


ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು