Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:3 - ಪರಿಶುದ್ದ ಬೈಬಲ್‌

3 ನಾನು ನಾಲ್ಕು ದೊಡ್ಡ ಮೃಗಗಳನ್ನು ಕಂಡೆ. ಅದರಲ್ಲಿ ಪ್ರತಿಯೊಂದು ಮೃಗವು ಉಳಿದ ಮೃಗಗಳಿಂದ ಭಿನ್ನವಾಗಿತ್ತು. ಆ ನಾಲ್ಕು ಮೃಗಗಳು ಸಮುದ್ರದಿಂದ ಹೊರಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಆ ಸಾಗರದಿಂದ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಂದಕ್ಕೊಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಂದಕ್ಕೊಂದು ಬೇರೆ ಬೇರೆ ರೂಪದ ನಾಲ್ಕು ದೊಡ್ಡ ಮೃಗಗಳು ಸಮುದ್ರದೊಳಗಿಂದ ಮೇಲೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:3
9 ತಿಳಿವುಗಳ ಹೋಲಿಕೆ  

ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.


ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು