ದಾನಿಯೇಲ 7:4 - ಪರಿಶುದ್ದ ಬೈಬಲ್4 “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು. ಅಧ್ಯಾಯವನ್ನು ನೋಡಿ |
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”