ದಾನಿಯೇಲ 7:6 - ಪರಿಶುದ್ದ ಬೈಬಲ್6 “ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡೋಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿ |