Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:7 - ಪರಿಶುದ್ದ ಬೈಬಲ್‌

7 “ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:7
17 ತಿಳಿವುಗಳ ಹೋಲಿಕೆ  

ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.


ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.


ಆ ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಆಕಾಶಕ್ಕೆ ಮುಟ್ಟುವಂತೆ ಬೆಳೆಯಿತು. ಆ ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.


ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.


ಆ ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ.


ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು