ದಾನಿಯೇಲ 7:8 - ಪರಿಶುದ್ದ ಬೈಬಲ್8 “ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
“ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.