Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:9 - ಪರಿಶುದ್ದ ಬೈಬಲ್‌

9 “ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:9
34 ತಿಳಿವುಗಳ ಹೋಲಿಕೆ  

ಆತನ ತಲೆಕೂದಲು ಮಂಜಿನಂತೆಯೂ ಉಣ್ಣೆಯಂತೆಯೂ ಬೆಳ್ಳಗಿದ್ದವು; ಕಣ್ಣುಗಳು ಬೆಂಕಿಯ ಜ್ವಾಲೆಯಂತಿದ್ದವು;


ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ.


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.


ನಾವು ದೇವರಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಏನೆಂದರೆ, ದೇವರು ಬೆಳಕಾಗಿದ್ದಾನೆ; ಆತನಲ್ಲಿ ಅಂಧಕಾರವಿಲ್ಲ.


ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು.


ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.


ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.


ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು