ದಾನಿಯೇಲ 8:1 - ಪರಿಶುದ್ದ ಬೈಬಲ್1 ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆನು. ಇದು ಮೊದಲಿನ ದರ್ಶನದ ತರುವಾಯ ಕಂಡದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೊದಲು ನನಗೆ ಕಾಣಿಸಿದ ಕನಸಲ್ಲದೆ, ಅರಸ ಬೇಲ್ಶಚ್ಚರನ ಆಳ್ವಿಕೆಯ ಮೂರನೇ ವರ್ಷದಲ್ಲಿ ದಾನಿಯೇಲನಾದ ನನಗೆ ಇನ್ನೊಂದು ಕನಸು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.