ದಾನಿಯೇಲ 8:11 - ಪರಿಶುದ್ದ ಬೈಬಲ್11 ಆ ಚಿಕ್ಕ ಕೊಂಬು ಅತಿ ಪ್ರಬಲವಾಯಿತು ಮತ್ತು ನಕ್ಷತ್ರಾಧಿಪತಿಯನ್ನು (ದೇವರನ್ನು) ವಿರೋಧಿಸತೊಡಗಿತು. ಆ ಚಿಕ್ಕ ಕೊಂಬು ನಕ್ಷತ್ರಾಧಿಪತಿಗೆ ನಿತ್ಯಹೋಮಗಳು ಸಲ್ಲದಂತೆ ಮಾಡಿತು. ಜನರು ನಕ್ಷತ್ರಾಧಿಪತಿಯನ್ನು ಪೂಜಿಸುವ ಸ್ಥಳವನ್ನು ಕೆಡವಿಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದು ಯೆಹೋವ ದೇವರ ಸೈನ್ಯದ ಅಧಿಪತಿಗೆ ವಿರೋಧವಾಗಿ ಬಲಗೊಂಡು, ನಿತ್ಯ ಯಜ್ಞವನ್ನು ಯೆಹೋವ ದೇವರಿಗೆ ಸಲ್ಲದಂತೆ ಮಾಡಿ, ಅವನ ಪವಿತ್ರ ಸ್ಥಾನವನ್ನು ಕೆಡವಿ ಹಾಕಲಾಯಿತು. ಅಧ್ಯಾಯವನ್ನು ನೋಡಿ |
“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.