ದಾನಿಯೇಲ 8:16 - ಪರಿಶುದ್ದ ಬೈಬಲ್16 ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಈ ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಆ ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಈ ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ - ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು ಎಂದು ಮನುಷ್ಯಧ್ವನಿಯಂಥ ಒಂದು ವಾಣಿಯು ಊಲಾಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿ |