ದಾನಿಯೇಲ 8:17 - ಪರಿಶುದ್ದ ಬೈಬಲ್17 ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು. ಅಧ್ಯಾಯವನ್ನು ನೋಡಿ |