ದಾನಿಯೇಲ 8:24 - ಪರಿಶುದ್ದ ಬೈಬಲ್24 ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು ಪ್ರಬಲನಾಗುವನು, ಆದರೆ ಬಲದಿಂದಲ್ಲ; ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು ಇಷ್ಟಾರ್ಥವನ್ನು ತೀರಿಸಿಕೊಳ್ಳುವನು; ಬಲಿಷ್ಠರನ್ನೂ ದೇವರ ಜನರನ್ನೂ ಧ್ವಂಸಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿ |