Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:3 - ಪರಿಶುದ್ದ ಬೈಬಲ್‌

3 ನಾನು ಕಣ್ಣೆತ್ತಿ ನೋಡಲಾಗಿ ಊಲಾ ನದಿಯ ಪಕ್ಕದಲ್ಲಿ ನಿಂತುಕೊಂಡಿದ್ದ ಟಗರೊಂದು ನನ್ನ ಕಣ್ಣಿಗೆ ಬಿತ್ತು. ಟಗರಿಗೆ ಎರಡು ಉದ್ದವಾದ ಕೊಂಬುಗಳಿದ್ದವು. ಆ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದು ಕೊಂಬು ಇನ್ನೊಂದು ಕೊಂಬಿಗಿಂತ ಉದ್ದವಾಗಿತ್ತು. ಉದ್ದವಾದ ಕೊಂಬು ಇನ್ನೊಂದು ಕೊಂಬಿಗಿಂತ ಹಿಂದಕ್ಕೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಣ್ಣೆತ್ತಿ ನೋಡಿದಾಗ ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿದ್ದು ಕಾಣಿಸಿತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು; ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದು, ಆ ದೊಡ್ಡದು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:3
25 ತಿಳಿವುಗಳ ಹೋಲಿಕೆ  

“ನೀನು ಎರಡು ಕೊಂಬುಗಳುಳ್ಳ ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು.


ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು.


ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು.


ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.


ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು.


ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು.


ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.


ಆಗ ನಾನು ಮೇಲೆ ನೋಡಿದಾಗ ನಾಲ್ಕು ಕೊಂಬುಗಳನ್ನು ಕಂಡೆನು.


“ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.


ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.


ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು.


“ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.


ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.


ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.


ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು