Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:4 - ಪರಿಶುದ್ದ ಬೈಬಲ್‌

4 ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:4
18 ತಿಳಿವುಗಳ ಹೋಲಿಕೆ  

“ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


“ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


ನೀವು ನಿಮ್ಮ ಶಕ್ತಿಯಿಂದ ಬೇರೆ ಕುರಿಗಳನ್ನು ದೂಡಿಬಿಡುವಿರಿ. ನಿಮ್ಮ ಕೊಂಬುಗಳಿಂದ ಬಲಹೀನ ಕುರಿಗಳನ್ನು ಹಾದುಬಿಡುವಿರಿ. ಅವುಗಳು ಆ ಸ್ಥಳದಿಂದ ಓಡಿಬಿಡುವಂತೆ ಮಾಡುವಿರಿ.


ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!


ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.


ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು.


ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು