Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:5 - ಪರಿಶುದ್ದ ಬೈಬಲ್‌

5 ನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದುಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಡುವಲಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಸೋಕದೆ ಓಡಿಬಂತು; ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:5
7 ತಿಳಿವುಗಳ ಹೋಲಿಕೆ  

ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ.


ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು.


ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.


“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.


“ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.


ಆ ಪ್ರತಿಮೆಯ ತಲೆಯನ್ನು ಚೊಕ್ಕ ಚಿನ್ನದಿಂದ ಮಾಡಲಾಗಿತ್ತು. ಅದರ ಎದೆ ಮತ್ತು ತೋಳುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಹೊಟ್ಟೆ, ಸೊಂಟ ಮತ್ತು ತೊಡೆಗಳು ಕಂಚಿನಿಂದ ಮಾಡಲ್ಪಟ್ಟಿದ್ದವು.


ಆ ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಆ ಹೋತಕ್ಕೆ ಬಹಳ ಕೋಪ ಬಂದಿತ್ತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು