Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:11 - ಪರಿಶುದ್ದ ಬೈಬಲ್‌

11 ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:11
30 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


“ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, ನೀವೆಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” ಎನ್ನುತ್ತಾನೆ ಯೆಹೋವನು.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೋ ಅದೆಲ್ಲವನ್ನು ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಈ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ.


ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”


“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.


ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.


ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ.


ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು