Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:12 - ಪರಿಶುದ್ದ ಬೈಬಲ್‌

12 “ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 [ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:12
31 ತಿಳಿವುಗಳ ಹೋಲಿಕೆ  

ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ನನ್ನ ಸಹಾಯದಿಂದ ಅಧಿಪತಿಗಳು ಆಡಳಿತ ಮಾಡುವರು; ನಾಯಕರು ದೊರೆತನ ಮಾಡುವರು.


ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.


ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ದಿಮಾತುಗಳಿಗೆ ಕಿವಿಗೊಡಿರಿ.


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


“ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.


ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.


ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು