ದಾನಿಯೇಲ 9:15 - ಪರಿಶುದ್ದ ಬೈಬಲ್15 “ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನಕೃತ್ಯಗಳನ್ನು ಮಾಡಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಅಧ್ಯಾಯವನ್ನು ನೋಡಿ |
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.