ದಾನಿಯೇಲ 9:17 - ಪರಿಶುದ್ದ ಬೈಬಲ್17 “ಯೆಹೋವನೇ, ನಿನ್ನ ಸೇವಕನಾದ ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕೋರಿ ಮಾಡುವ ನನ್ನ ಪ್ರಾರ್ಥನೆಯನ್ನು ಲಾಲಿಸು. ನಿನ್ನ ಪವಿತ್ರ ಸ್ಥಳಕ್ಕಾಗಿ ಒಳ್ಳೆಯದನ್ನು ಮಾಡು. ಆ ಕಟ್ಟಡವನ್ನು ನಾಶಮಾಡಲಾಗಿದೆ. ಯೆಹೋವನೇ, ಈ ಒಳ್ಳೆಯ ಕಾರ್ಯಗಳನ್ನು ನಿನ್ನ ಹಿತಕ್ಕಾಗಿ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿವಿುತ್ತವೇ ಪ್ರಸನ್ನಮುಖದಿಂದ ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ. ಅಧ್ಯಾಯವನ್ನು ನೋಡಿ |
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.