Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:20 - ಪರಿಶುದ್ದ ಬೈಬಲ್‌

20 ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:20
24 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ದಾನಿಯೇಲನು ಹೇಳುವುದೇನೆಂದರೆ: ಆ ಸಮಯದಲ್ಲಿ ದಾನಿಯೇಲನೆಂಬ ನಾನು ಮೂರು ವಾರ ಶೋಕದಲ್ಲಿದ್ದೆನು.


ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.


“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು