Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:21 - ಪರಿಶುದ್ದ ಬೈಬಲ್‌

21 ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:21
27 ತಿಳಿವುಗಳ ಹೋಲಿಕೆ  

ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಈ ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಆ ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಈ ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು.


ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.


ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.


ಆ ಮನುಷ್ಯಕುಮಾರನಂತಿರುವವನು ಪುನಃ ನನ್ನನ್ನು ಸ್ಪರ್ಶಿಸಿದನು. ಆತನು ನನ್ನನ್ನು ಸ್ಪರ್ಶಿಸಿದಾಗ ನನಗೆ ಉಪಶಮನವಾಯಿತು.


ಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿದ್ರಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ,


ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಮುಂಜಾನೆ ಒಂದು ಕುರಿಮರಿಯನ್ನು ಮತ್ತು ಸಾಯಂಕಾಲ ಮತ್ತೊಂದು ಕುರಿಮರಿಯನ್ನು ಸಮರ್ಪಿಸಬೇಕು.


ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”


ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.


ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.


ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.


ಆಗ ಒಂದು ಕೈ ನನ್ನನ್ನು ಮುಟ್ಟಿತು. ನಾನು ಮೊಣಕಾಲುಗಳನ್ನು ಮತ್ತು ಅಂಗೈಗಳನ್ನು ನೆಲಕ್ಕೆ ಊರಿ ಬಾಗಿ ನಿಂತುಕೊಂಡೆ. ನಾನು ಭಯದಿಂದ ನಡುಗುತ್ತಿದ್ದೆ.


ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು.


ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.


ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ.


ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.


ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು