Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:24 - ಪರಿಶುದ್ದ ಬೈಬಲ್‌

24 “ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:24
50 ತಿಳಿವುಗಳ ಹೋಲಿಕೆ  

ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


“ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.


ಮೋಶೆಯು ಇಂತೆಂದಿದ್ದಾನೆ: ‘ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಆ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಆ ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.


ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.


ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.


ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.”


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


“ಅನಂತರ ನೀನು ನಿನ್ನ ಬಲಗಡೆಯಲ್ಲಿ ನಲವತ್ತು ದಿವಸಗಳ ಕಾಲ ಮಲಗಬೇಕು. ಈ ಸಾರಿ ನೀನು ಯೆಹೂದದ ದೋಷಗಳನ್ನು ನಲವತ್ತು ದಿವಸ ಹೊತ್ತುಕೊಳ್ಳುವೆ. ಒಂದು ದಿವಸವು ಒಂದು ವರ್ಷಕ್ಕೆ ಸಮಾನ. ಯೆಹೂದವು ಎಷ್ಟು ಕಾಲ ಶಿಕ್ಷೆಯನ್ನು ಅನುಭವಿಸಬೇಕೆಂದು ಇದು ತೋರಿಸುವುದು.”


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ಎಲ್ಲಾ ಪ್ರವಾದನೆಗಳು ಮತ್ತು ಮೋಶೆಯ ಧರ್ಮಶಾಸ್ತ್ರವು ಯೋಹಾನನು ಬರುವ ತನಕ ಪರಲೋಕರಾಜ್ಯದ ಕುರಿತಾಗಿ ಮುಂತಿಳಿಸಿದವು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


“ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.


ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣವಾದ ಜೆರುಸಲೇಮಿಗೆ ಕರೆದುಕೊಂಡು ಹೋಗಿ, ದೇವಾಲಯದ ಅತಿ ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ,


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’


ನೀನು ಮುನ್ನೂರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳಬೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು.


ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು