ದಾನಿಯೇಲ 9:27 - ಪರಿಶುದ್ದ ಬೈಬಲ್27 “ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.