Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:6 - ಪರಿಶುದ್ದ ಬೈಬಲ್‌

6 ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:6
29 ತಿಳಿವುಗಳ ಹೋಲಿಕೆ  

ನಾವು ನಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಿಲ್ಲ. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ ಕಟ್ಟಳೆಗಳನ್ನು ತಿಳಿಸಿದನು. ಆದರೆ ನಾವು ಆ ಕಟ್ಟಳೆಗಳನ್ನು ಪಾಲಿಸಲಿಲ್ಲ.


ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.


ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು