ದಾನಿಯೇಲ 9:7 - ಪರಿಶುದ್ದ ಬೈಬಲ್7 “ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ. ಅಧ್ಯಾಯವನ್ನು ನೋಡಿ |