Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:1 - ಪರಿಶುದ್ದ ಬೈಬಲ್‌

1 ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೊರ್ದನ್ ಹೊಳೆಯ ಆಚೆ, ಪಾರಾನಿಗೂ ತೋಫೆಲ್ ಲಾಬಾನ್ ಹಚೇರೋತ್ ದೀಜಾಹಾಬ್ ಎಂಬ ಸ್ಥಳಗಳಿಗೂ ನಡುವೆ, ಅರಣ್ಯದಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ ಮಾಡಿದ ಉಪನ್ಯಾಸಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:1
29 ತಿಳಿವುಗಳ ಹೋಲಿಕೆ  

ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.


ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.


ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು.


ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.


ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.”


ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು.


ಇದಾದನಂತರ, ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು.


ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದುಕೊಂಡರು.


ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.


ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.


“ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.


ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.


ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.


ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.


ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ಮೋಶೆಯು ಇಸ್ರೇಲರ ಸಮೂಹಕ್ಕೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು