Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:11 - ಪರಿಶುದ್ದ ಬೈಬಲ್‌

11 ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮ್ಮನ್ನು ಹೆಚ್ಚಿಸಲಿ; ಅವರೇ ವಾಗ್ದಾನಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಈಗ ಇರುವದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ ತಾನು ವಾಗ್ದಾನ ಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:11
16 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು” ಎಂದನು.


ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.


ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.


ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.


ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.


ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.


ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು