Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:15 - ಪರಿಶುದ್ದ ಬೈಬಲ್‌

15 “ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:15
12 ತಿಳಿವುಗಳ ಹೋಲಿಕೆ  

“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.


ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?


ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯಮಾಡಬೇಕು


“ಆಗ ನೀವು, ‘ಇದು ಒಳ್ಳೆಯ ಆಲೋಚನೆ’ ಎಂದು ಹೇಳಿದಿರಿ.


“ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು