ಧರ್ಮೋಪದೇಶಕಾಂಡ 1:19 - ಪರಿಶುದ್ದ ಬೈಬಲ್19 “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್ಬರ್ನೇಯಕ್ಕೆ ಸೇರಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್ಬರ್ನೇಯಕ್ಕೆ ಸೇರಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.