Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:21 - ಪರಿಶುದ್ದ ಬೈಬಲ್‌

21 ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪಿತೃಗಳ ದೇವರಾದ ಯೆಹೋವನು ಹೇಳಿದಂತೆ ಅದನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:21
20 ತಿಳಿವುಗಳ ಹೋಲಿಕೆ  

ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


“ನೀವು ನಿಮಗಿಂತ ಬಲಿಷ್ಠರಾದ ವೈರಿಗಳ ಮೇಲೆ ಯುದ್ಧಕ್ಕೆ ಹೋದಾಗ ಅವರ ರಥಾಶ್ವಗಳನ್ನು ಮತ್ತು ನಿಮಗಿಂತಲೂ ಹೆಚ್ಚಾದ ಸೈನ್ಯಬಲವನ್ನು ನೋಡಿ ನೀವು ಭಯಗ್ರಸ್ತರಾಗಬೇಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ತಂದವನು ಆತನೇ.


ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ಈ ದೇಶವನ್ನು ನಮಗೆ ಕೊಡುವನು.


ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು